News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಾರಿಗೆ ಸಿಬ್ಬಂದಿ‌ಗಳ ಜೊತೆ ಮಾತುಕತೆ ಇಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಸಾರಿಗೆ ಸಿಬ್ಬಂದಿ‌ಗಳ ಜೊತೆಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಇನ್ನು ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರತಿಭಟನೆಯ ಹೆಸರಿನಲ್ಲಿ ಕೆಲಸಕ್ಕೆ ಗೈರಾದವರಿಗೆ ವೇತನ ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸಿದವರಿಗಷ್ಟೇ ವೇತನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ‌ಗಳು ಹೇಳಿದ್ದಾರೆ.

ಹಬ್ಬಗಳ ಸಂದರ್ಭದಲ್ಲಿ ಸಾರಿಗೆ ನೌಕರರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ನೌಕರರ ಮೇಲಿನ ಪ್ರಕರಣಗಳನ್ನು ಸಹ ಹಿಂಪಡೆಯುವುದಿಲ್ಲ. ರಾಜ್ಯದಲ್ಲಿ ಸಾರಿಗೆ ಸುವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ಅಗತ್ಯ ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top