News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚಿಮ ಬಂಗಾಳ: 5ನೇ ಹಂತದ ಚುನಾವಣೆಗೆ ಕೇಂದ್ರ ಪಡೆಗಳ 853 ಕಂಪನಿ ನಿಯೋಜನೆ

ಕೋಲ್ಕತ್ತಾ: ಐದನೇ ಹಂತದ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳ 853 ಕಂಪನಿಗಳನ್ನು ನಿಯೋಜಿಸಲು ಭಾರತದ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಂತದಲ್ಲಿ ನಾಲ್ಕನೇ ಹಂತಕ್ಕೆ ಹೋಲಿಸಿದರೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಹಿಂದಿನ ಹಂತದಲ್ಲಿ 44 ವಿಧಾನಸಭಾ ಕ್ಷೇತ್ರಗಳಿಗೆ 789 ಕಂಪನಿಗಳನ್ನು ನಿಯೋಜಿಸಲಾಗಿತ್ತು.

853 ಕಂಪನಿಗಳ ಪೈಕಿ 283 ಕಂಪನಿಗಳನ್ನು 24 ಪರಗಣ ಜಿಲ್ಲೆಯಲ್ಲಿ ಮಾತ್ರ ನಿಯೋಜಿಸಲಾಗುವುದು ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಕೂಚ್ ಬೆಹಾರ್‌ನಂತಹ ಘಟನೆ ಮತ್ತೆ ಸಂಭವಿಸಬಾರದು ಎಂಬ‌ ಕಾರಣಕ್ಕಾಗಿ ಈ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದೆ, ಅಲ್ಲಿ ಹಿಂಸಾಚಾರದ ಸಮಯದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದ ವಿಧಾನಸಭಾ ಚುನಾವಣೆಗೆ ಪ್ರಚಾರ ಕೊನೆಗೊಂಡಿದೆ. ಆರು ಜಿಲ್ಲೆಗಳಲ್ಲಿ ವ್ಯಾಪಿಸಿರುವ 45 ಸ್ಥಾನಗಳಲ್ಲಿ ಶನಿವಾರ ಮತದಾನ ನಡೆಯಲಿದೆ. ಈ ಹಂತದಲ್ಲಿ 39 ಮಹಿಳೆಯರು ಸೇರಿದಂತೆ 319 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ಹಂತದಲ್ಲಿ ಉತ್ತರ ಬಂಗಾಳದ ಕಾಲಿಂಪಾಂಗ್, ಡಾರ್ಜಿಲಿಂಗ್ ಮತ್ತು ಜಲ್ಪೈಗುರಿ ಜಿಲ್ಲೆಗಳಲ್ಲಿ 13 ಸ್ಥಾನಗಳಿಗೆ ಮತದಾನ ನಡೆಯಲಿದೆ. ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮತದಾನದ ದಿನದಲ್ಲಿ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top