News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದ‌ಲ್ಲಿ ರೆಮಿಸಿಡ್ವಿರ್ ಕೊರತೆ ಇಲ್ಲ: ಪಿ ರವಿಕುಮಾರ್

ಬೆಂಗಳೂರು: ರಾಜ್ಯದ‌ಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ‌ಯಾಗಿದೆ. ರಾಜ್ಯದ‌ಲ್ಲಿ ಕೊರೋನಾ ಚಿಕಿತ್ಸೆ‌ಗೆ ಸಂಬಂಧಿಸಿದಂತೆ ಇರುವ ಔಷಧಗಳ ಕೊರತೆ ಇಲ್ಲ ಎಂದು ಸರ್ಕಾರ‌ದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ‌ಗೆ ನೀಡುವ ರೆಮಿಸಿಡ್ವಿರ್ ಔಷಧದ ಕೊರತೆ ಇಲ್ಲ. ಖಾಸಗಿ ಆಸ್ಪತ್ರೆಗಳು ತಮಗೆ ಅಗತ್ಯವಿರುವ ರೆಮಿಸಿಡ್ವಿರ್ ಔಷಧದ ಬಗ್ಗೆ ಮಾಹಿತಿಯನ್ನು ಸರ್ಕಾರ‌ಕ್ಕೆ ನೀಡಿದಲ್ಲಿ, ಅವುಗಳನ್ನು ತಾತ್ಕಾಲಿಕ ನೆಲೆಯಲ್ಲಿ ಒದಗಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನು ಈ ಔಷಧ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಅವರು, ಈ ಔಷಧವನ್ನು ಆಸ್ಪತ್ರೆಗಳಿಗೆ ಮಾತ್ರವೇ ರವಾನೆ ಮಾಡಲಾಗುತ್ತದೆ. ಅವುಗಳು ಕಾಳಸಂತೆಯಲ್ಲಿ ಮಾರಾಟ‌ವಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸದ್ಯ ಈ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಇದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ‌ಕ್ಕೂ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top