News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದ ಇತರ ಜಿಲ್ಲೆಗಳಿಗೂ ನೈಟ್ ಕರ್ಫ್ಯೂ ವಿಸ್ತರಣೆಗೆ ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ನೈಟ್ ಕರ್ಫ್ಯೂವನ್ನು ಇತರ ಪ್ರದೇಶಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಕೊರೋನಾ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೆರೆಯ ರಾಜ್ಯ ಮಹಾರಾಷ್ಟ್ರ‌ದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧಿಕಾರಿಗಳಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಾಗೆಯೇ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಎ. 18 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ವಪಕ್ಷ‌ಗಳ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಸಾಧಕ – ಬಾಧಕ‌ಗಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ‌ರೂ ಸಹ ಸರ್ಕಾರ‌ದ ಜೊತೆಗೆ ಕೈ ಜೋಡಿಸಬೇಕಿದ್ದು, ಸರ್ಕಾರ‌ದ ಎಲ್ಲಾ ಮಾರ್ಗಸೂಚಿ‌ಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮನವಿ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top