News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖಾಸಗಿ ಆಸ್ಪತ್ರೆಗಳಿಗೆ ರೆಮಿಸಿಡ್ವಿರ್ ಪೂರೈಕೆಗೆ ನೋಡಲ್ ಏಜೆನ್ಸಿ ನಿಯೋಜನೆ

ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಅಗತ್ಯವಿರುವ ರೆಮಿಡಿಸ್ವಿರ್ ಔಷಧ ಸರಬರಾಜಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ರೆಮಿಸಿಡ್ವಿರ್ ಔಷಧ ಸಮರ್ಪಕ ಪೂರೈಕೆಗೆ SAST ಅನ್ನು ನೋಡಲ್ ಏಜೆನ್ಸಿ‌ಯಾಗಿ ನಿಯೋಜನೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಗಳು ಮತ್ತು ಕೊರೋನಾ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಈ ಔಷಧವನ್ನು ಸಮರ್ಪಕವಾಗಿ ನೀಡುವ ಹೊಣೆಗಾರಿಕೆ ವಹಿಸಿರುವುದಾಗಿ ಅವರು ತಿಳಿಸಿದ್ದಾರೆ.

ಸ್ವಯಂಪ್ರೇರಣೆಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರ ಚಿಕಿತ್ಸೆಗೆ ರೆಮಿಸಿಡ್ವಿರ್ ಪೂರೈಸಲು ಕೆಂಪಯ್ಯ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು ಸೋಂಕಿತರ ಎಸ್‌ಆರ್‌ಎಫ್ ಐಡಿ ಮೊದಲಾದ ವಿವರಗಳನ್ನು ವಾಟ್ಸಾಪ್ ಇಲ್ಲವೇ ಇ ಮೇಲ್ ಮಾಡುವ ಮೂಲಕ ಔಷಧ ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top