News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ‌ಮ್ಮು-ಕಾಶ್ಮೀರ: ಡ್ರಗ್ಸ್ ಕಳ್ಳಸಾಗಣೆ, ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಸೇನೆ

ನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಗಡಿ ಭದ್ರತಾ ಪಡೆ ಮತ್ತು ಪೊಲೀಸರೊಂದಿಗೆ ಸೇರಿ ಕುಪ್ವಾರಾ ಜಿಲ್ಲೆಯ ತಂಗ್ಧರ್ ಸೆಕ್ಟರ್‌ನ ಫಾರ್ವರ್ಡ್ ಪ್ರದೇಶದಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು 10 ಕಿಲೋಗ್ರಾಂಗಳಷ್ಟು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದರ ಬೆಲೆ ಸುಮಾರು 50 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ.

ಮಂಗಳವಾರ ರಾತ್ರಿ ಕಳ್ಳಸಾಗಾಣಿಕೆದಾರರು ನಿಯಂತ್ರಣ ರೇಖೆಯ ಉದ್ದಕ್ಕೂ ಮಾದಕವಸ್ತುಗಳನ್ನು ಹೊತ್ತುಕೊಂಡು ಹೋಗುವುದನ್ನು ಪತ್ತೆ ಮಾಡಲಾಗಿತ್ತು, ಪಾಕ್ ಮೂಲದ ಭಯೋತ್ಪಾದಕರ ಬೆಂಬಲ ಹೊಂದಿದ್ದ ಈ ಕಳ್ಳಸಾಗಾಣಿಕೆದಾರರಿಗೆ ಸವಾಲು ಹಾಕಿ ಭಾರತೀಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು ಮತ್ತು ಅವರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದವು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ವಕ್ತಾರರ ಪ್ರಕಾರ, ಕಾರ್ಯಾಚರಣೆ ಸಂದರ್ಭದಲ್ಲಿ ಸಣ್ಣ ಮಟ್ಟಿನ ಗುಂಡಿನ ಚಕಮಕಿ ಕೂಡ ನಡೆದಿದೆ. ಇದರಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂತರ ಇಂದು ಬೆಳಿಗ್ಗೆ ವಿಸ್ತೃತ ಕಾರ್ಯಾಚರಣೆ ನಂತರ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಒಳನುಸುಳುಕೋರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳಸಾಗಣೆ ಮತ್ತು ಒಳನುಸುಳುವಿಕೆ ಪ್ರಯತ್ನದಲ್ಲಿ ಭಾಗಿಯಾಗಿರುವ ಜಾಲವನ್ನು ಗುರುತಿಸಿ ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಇದು ಸತತ ಎರಡನೇ ‘ನಾರ್ಕೊ ಟೆರರ್ ಮಾಡ್ಯೂಲ್’ನ ಧ್ವಂಸ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top