News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುಂಭಮೇಳ‌ದಲ್ಲಿ ಭಾಗವಹಿಸಿ ರಾಜ್ಯಕ್ಕಾಗಮಿಸುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ

ಬೆಂಗಳೂರು: ಉತ್ತರಾಖಂಡ್‌ನಲ್ಲಿರುವ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ರಾಜ್ಯಕ್ಕೆ ಆಗಮಿಸುವವರಿಗೆ ಹೋಂ ಕ್ವಾರಂಟೈನ್, ಕೊರೋನಾ ಮಾದರಿ ಪರೀಕ್ಷೆ ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧ ಸಚಿವ ಡಾ ಕೆ ಸುಧಾಕರ್ ಮಾತನಾಡಿ, ಕುಂಭಮೇಳ‌ದಲ್ಲಿ ಭಾಗವಹಿಸಿದ ಯಾತ್ರಿಗಳು ಕೊರೋನಾ ಮಾದರಿ ಪರೀಕ್ಷೆ‌ ನಡೆಸಿ, ಅದರಲ್ಲಿ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ತಮ್ಮ ಎಂದಿನ ಕಾರ್ಯ‌ಗಳನ್ನು ನಡೆಸಬಹುದು ಎಂಬುದಾಗಿ ತಿಳಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ ಕುಂಭಮೇಳ‌ದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಾರೆ. ಇದರಿಂದಾಗಿ ಕೊರೋನಾ ಸೋಂಕು ತಗುಲುವ ಸಾಧ್ಯತೆ ಸಹ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top