ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿರುವಷ್ಟು ಸೋಂಕಿನ ಪ್ರಮಾಣ ಕರ್ನಾಟಕದಲ್ಲಿ ಕಂಡು ಬಂದಿಲ್ಲ. ಹೀಗಾಗಿ ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರುವ ಯಾವುದೇ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಇತರ ರಾಜ್ಯಗಳು ಅಳವಡಿಸಿಕೊಂಡಿರುವ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಪರಿಶೀಲನೆ, ಅವಲೋಕನ ನಡೆಸುತ್ತಿದೆ. ಜೊತೆಗೆ ಕೊರೋನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನಾಧರಿಸಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸೋಂಕಿತರ ಪೈಕಿ ಎಷ್ಟು ಜನರು ಮರಣವನ್ನಪ್ಪಿದ್ದಾರೆ ಎಂಬ ಬಗ್ಗೆ ಅವಲೋಕನ ನಡೆಸಿ ಸಾವಿನ ಪ್ರಮಾಣವನ್ನು ಅಂದಾಜು ಮಾಡಲಾಗುತ್ತದೆ. ರಾಜ್ಯದಲ್ಲಿ .5% ದಿಂದ .6% ಗಳಷ್ಟು ಸಾವಿನ ಪ್ರಮಾಣ ಇದ್ದು, ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ವ್ಯವಸ್ಥಿಯಲ್ಲಿ ಚುಚ್ಚು ಮದ್ದಿನ ಕೊರತೆ ಆಗಿಲ್ಲ. ಕೊರೋನಾ ವಿಚಾರದಲ್ಲಿ ರಾಜಕೀಯ ಸಲ್ಲ. ಎಲ್ಲರೂ ಒಗ್ಗಟ್ಟಿನಿಂದ ಸೋಂಕಿನ ವಿರುದ್ಧ ಹೋರಾಟ ನಡೆಸಿದರಷ್ಟೇ ಸೋಂಕು ನಿಯಂತ್ರಣ ಸಾಧ್ಯ ಎಂದು ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.