ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಕೊರೋನಾ ನಿಯಂತ್ರಣಕ್ಕೆ ಪೂರಕವಾಗುವಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿಯು ಬೆಸ್ಕಾಂ ಸಹಭಾಗಿತ್ವದಲ್ಲಿ ಪ್ರತ್ಯೇಕ ಸಹಾಯವಾಣಿ ಸಂಖ್ಯೆ 1912 ಅನ್ನು ಆರಂಭ ಮಾಡಿದೆ.
ಕೊರೋನಾ ರೋಗಿಗಳಿಗೆ ಸಂಬಂಧಿಸಿದಂತೆ ಹಾಸಿಗೆ ಹಂಚಿಕೆ, ಆಸ್ಪತ್ರೆಗೆ ಸಂಬಂಧಿಸಿದ ಬಿಲ್ಲಿಂಗ್ ಸಮಸ್ಯೆಗಳು, ಸಾಮಾನ್ಯ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಸಹಾಯವಾಣಿ ಸಹಾಯ ನೀಡಲಿದೆ. ಈಗಿರುವ 15 ಲೈನ್ಗಳ ಜೊತೆಗೆ ಮತ್ತೆ 15 ಲೈನ್ಗಳನ್ನು ಸೇರಿಸಲಾಗಿದ್ದು, ಆ ಮೂಲಕ 30 ಲೈನ್ಗಳು ಕಾರ್ಯಾಚರಿಸಲಿವೆ. ಇದರಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗೆ ಅಗತ್ಯ ಮಾಹಿತಿ ಒದಗಿಸಲಿದ್ದಾರೆ ಎಂದು ಬಿಬಿಎಂಪಿ ಹೇಳಿದೆ.
ಕೊರೋನಾ ಸೋಂಕಿನ ಬಗ್ಗೆ ಮಾಹಿತಿ ನೀಡುವ ಸಲುವಾಗಿ ರಾಜ್ಯ ಸರ್ಕಾರ ಈ ಹಿಂದೆಯೇ ಆರಂಭ ಮಅಡಿದ್ದ 14410 ಆಪ್ತಮಿತ್ರ ಸಹಾಯವಾಣಿ ಸಹ ಕಾರ್ಯ ನಿರ್ವಹಿಸುತ್ತಿದ್ದು, ಆಂಬ್ಯುಲೆನ್ಸ್ಗಾಗಿ 108, ಕೊರೋನಾ ರೋಗ ಲಕ್ಷಣಗಳಿದ್ದರೆ 104 ಹಾಗೂ ಪಾಲಿಕೆಗೆ ಸಂಬಂಧಿಸಿದಂತೆ ಇರುವ ಎಲ್ಲಾ ವಾರ್ಡ್ಗಳಲ್ಲಿಯೂ ಸ್ಥಾಪಿಸಲಾಗಿರುವ ಕೋವಿಡ್ ವಾರ್ ರೂಂನಲ್ಲಿ ಒಂದೊಂದು ಸಹಾಯವಾಣಿಗಳು ಕಾರ್ಯ ನಿರ್ವಹಿಸುತ್ತಿವೆ. ಇನ್ನು ಸದ್ಯ ಆರಂಭಿಸಲಾಗಿರುವ ಬೆಸ್ಕಾಂ ಅಡಿ ಕಾರ್ಯ ನಿರ್ವಹಿಸುವ ಸಹಾಯವಾಣಿ 1912 ನಲ್ಲಿ ಕಾರ್ಯ ನಿರ್ವಹಿಸುವ ಸದಸ್ಯರೇ ಕರೆ ಸ್ವೀಕರಿಸಿ, ಅಗತ್ಯ ಮಾಹಿತಿ ನೀಡಲಿದ್ದಾರೆ ಎಂಬುದಾಗಿಯೂ ಬಿಬಿಎಂಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.