ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇದೇ ವೇಳೆ ಕೊರೋನಾ ಸಂಬಂಧ ರಾಜ್ಯದ ಕೋವಿಡ್ ತಾಂತ್ರಿಕ ಸಮಿತಿ ವರದಿಯೊಂದನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದೆ. ಹಾಗೆಯೇ ಸೋಂಕು ತಗುಲಿ ಪರಿಣಾಮಕಾರಿ ಚಿಕಿತ್ಸೆ ದೊರೆಯದೆ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ನಡುವೆ ಕೊರೋನಾ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಈ ವರದಿಯೂ ಜನಮಾನಸದಲ್ಲಿ ತಲ್ಲಣವನ್ನುಂಟು ಮಾಡಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಹ ಸರ್ಕಾರ ಸೂಚಿಸಿದ ನಿಯಮಗಳನ್ನು ಅನುಸರಿಸುವುದರ ಜೊತೆಗೆ, ಕೆಲವೊಂದು ಕಠಿಣ ಸ್ವ ನಿರ್ಧಾರಗಳ ಜೊತೆಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವತ್ತ ಈ ಸಂದರ್ಭದಲ್ಲಿ ಚಿತ್ತ ಹರಿಸಬೇಕಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಅನಗತ್ಯವಾಗಿ ಸಾರ್ವಜನಿಕವಾಗಿ ಓಡಾಟ ನಡೆಸದೇ ಇರುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಹೇರಿಕೊಂಡಲ್ಲಿ ಸೋಂಕು ನಿಯಂತ್ರಣ ಸಾಧ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.