ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಪ್ರಸಿದ್ಧಿ ಪಡೆದ ಭಾಷಾ ತಜ್ಞ, ಶತಾಯುಷಿ ಪದ್ಮಶ್ರೀ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಬೆಂಗಳೂರಿನಲ್ಲಿಂದು ಇಹಲೋಕ ತ್ಯಜಿಸಿದರು.
108 ವರ್ಷದ ಪ್ರೊ. ಜಿ. ವಿ. ಅವರು ಭಾನುವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ. ಕಳೆದ ವಾರದಲ್ಲಿ ಮೂತ್ರನಾಳದ ಸೋಂಕಿಗೆ ಒಳಗಾಗಿದ್ದ ಅವರನ್ನು ಶಾಂತಿ ಸರ್ಜಿಕಲ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಂಕಿನಿಂದ ಗುಣಮುಖರಾಗಿದ್ದ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ರಾತ್ರಿಯ ವೇಳೆ ವಯೋಸಹಜವಾಗಿ ನಿಧನರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಮಧ್ಯಾಹ್ನ 12.30 ರ ಸುಮಅರಿಗೆ ನಡೆಯಲಿದೆ. ಅವರ ಜಯನಗರ 7 ನೇ ಬ್ಲಾಕ್ ನಿವಾಸದ ಮುಂದೆ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬ ವರ್ಗ ತಿಳಿಸಿದೆ.
ಮೃತರು ಕನ್ನಡ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ಭಾಷಾ ವಿಚಾರವಾಗಿ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯನ್ನೂ ಅವರು ಮುಡಿಗೇರಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೂ ಅವರು ಭಾಜನರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.