ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಅಪರಾಹ್ನ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ತಜ್ಞರ ಜೊತೆಗೆ ಸಭೆ ನಡೆಯಲಿದೆ.
ಕೊರೋನಾ ಸೋಂಕು ವ್ಯಾಪಿಸುವ ವೇಗ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕಠಿಣ ಕ್ರಮಗಳ ಸಂಬಂಧ ಈ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸುವ ಸಾಧ್ಯತೆ ಇದೆ. ಸದಯ ಸಿಎಂ ಬಿಎಸ್ವೈ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಭೆಯಲ್ಲಿ ಬೆಂಗಳೂರು ನಗರದ ಸಚಿವರು, ಶಾಸಕರೂ ಭಾಗವಹಿಸಲಿದ್ದು, ಮಿತಿಮೀರುತ್ತಿರುವ ಕೊರೋನಾ ಸೋಂಕು ಹತೋಟಿಗೆ ತೆಗೆದುಕೊಳ್ಳಬಹುದಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ. ಈ ಸಭೆಯಲ್ಲಿ ಭಾಗವಹಿಸಿದವರು ನೀಡುವ ಸಲಹೆ ಸೂಚನೆಗಳನ್ನು ಪರಿಶೀಲನೆ ನಡೆಸಿ ಬಳಿಕ ಕ್ರಮಗಳನ್ನು ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.