ಬಳ್ಳಾರಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುವಂತಾಗಿದೆ.
ಆಮ್ಲಜನಕ ಕೊರತೆಯನ್ನು ನೀಗಿಸಿಕೊಳ್ಳುವ ಹಿನ್ನೆಲೆಯಲ್ಲಿ ದೇಶದ ಹಲವು ಜಿಲ್ಲೆಗಳು ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿರುವ ಆಕ್ಸಿಜನ್ ಘಟಕಗಳತ್ತ ಮುಖ ಮಾಡಿವೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ ರಾಜ್ಯಗಳಿಂದ ಬಳ್ಳಾರಿಯ ಆಮ್ಲಜನಕ ಘಟಕಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಇಲ್ಲಿನ ಘಟಕಗಳಿಂದ ಆಕ್ಸಿಜನ್ ಸಂಗ್ರಹಣೆಗೆ ಸಂಬಂಧಿಸಿದಂತೆ ಪುಣೆ ಕಾರ್ಪೊರೇಷನ್ ಟ್ಯಾಂಕರ್ಗಳನ್ನು ಸಹ ಕಳುಹಿಸಿದೆ.
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 8 ಆಮ್ಲಜನಕ ಉತ್ಪಾದನಾ ಘಟಕಗಳಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಕ್ಕೆ 30 ಟನ್ ಆಕ್ಸಿಜನ್ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಸಂಗ್ರಹಿಸಿಕೊಂಡು, ಮುಂದಿನ ದಿನಗಳಲ್ಲಿ ಮಹಾರಾಷ್ಟ್ರಕ್ಕೆ 300 ಟನ್ ಆಕ್ಸಿಜನ್ ಪೂರೈಕೆ ಮಾಡುವ ಸಂಬಂದವೂ ಚಿಂತನೆ ನಡೆದಿದೆ. ಮಹಾರಾಷ್ಟ್ರ ಈ ಹಿಂದೆಯೇ 300 ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಆರ್ಡರ್ ನೀಡಿದ್ದು ಈ ಹಿನ್ನೆಲೆಯಲ್ಲಿ ಈ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಬೇರೆ ಭಾಗಗಳಿಗೆ ಹೋಲಿಕೆ ಮಾಡಿದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನೆಗೆ ಬೇಕಾದ ಅಗತ್ಯ ಕಚ್ಚಾ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತವೆ. ಸುಲಭವಾಗಿಯೂ ದೊರೆಯುತ್ತದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಈ 8 ಆಮ್ಲಜನಕ ನಿರ್ಮಾಣ ಘಟಕಗಳಿಂದಲೇ ಆಕ್ಸಿಜನ್ ಪೂರೈಕೆಯಾಗುತ್ತದೆ. ಸದ್ಯ ಈ ಘಟಕಗಳಲ್ಲಿ ಆಕ್ಸಿಜನ್ ಉತ್ಪಾದನಾ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.