ಬೆಂಗಳೂರು: ವಲಸಿಗರಿಗೆ ದೇಶದ ಯಾವುದೇ ಭಾಗದಲ್ಲಿಯೂ ಸುಲಭವಾಗಿ ಪಡಿತರ ಪಡೆಯುವುದಕ್ಕೆ ಅನುಕೂಲವಾಗುವಂತೆ ರೂಪಿಸಲಾಗಿರುವ ʼಒನ್ ನೇಷನ್, ಒನ್ ರೇಷನ್ʼ ಕಾರ್ಡ್ ಆಪ್ ಇನ್ನು ಮುಂದೆ ಕನ್ನಡದಲ್ಲಿಯೂ ಲಭ್ಯವಾಗಲಿದೆ.
ಈ ಹಿಂದೆ ಈ ಯೋಜನೆಯಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳನ್ನು ಮಾತ್ರವೇ ಬಳಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಇದರಲ್ಲಿ ಕನ್ನಡವನ್ನು ಸಹ ಬಳಕೆಗೆ ತರಲಾಗಿದ್ದು, ಇದರಿಂದಾಗಿ ರಾಜ್ಯದ ವಲಸಿಗರಿಗೆ ದೇಶದೆಲ್ಲೆಡೆ ಪಡಿತರ ಪಡೆದುಕೊಳ್ಳುವುದಕ್ಕೆ ಹೆಚ್ಚಿನ ಅನುಕೂಲಗಳನ್ನು ಮಾಡಿಕೊಡಲಿದೆ. ವ್ಯಕ್ತಿಯ ಭೌತಿಕ ಸ್ಥಳವನ್ನು ಲೆಕ್ಕಿಸದೆ, ರಾಷ್ಟ್ರೀಯ ಆಹಾರ ಭದ್ರತೆಯಡಿಯಲ್ಲಿ ದೇಶದ ಯಾವುದೇ ಮೂಲೆಯಲ್ಲಿಯೂ ತಮ್ ಆಹಾರದ ಹಕ್ಕನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಹೆಚ್ಚು ಉಪಯುಕ್ತವಾಗಲಿದೆ.
ಈ App ಬಳಕೆಗೆ ತೊಡಕಾಗಿದ್ ಭಾಷಾ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಈಗಾಗಲೇ ಇರುವ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ಜೊತೆಗೆ, ಪ್ರಾದೇಶಿಕ ಭಾಷೆಗಳಿಗೂ ಹೆಚ್ಚಿನ ಆದ್ಯತೆ ನೀಡಿದೆ. ಇದಕ್ಕೆ ಪೂರಕ ಎಂಬಂತೆ ಕನ್ನಡ, ತಮಿಳು, ತೆಲುಗು, ಪಂಜಾಬಿ, ಒರಿಯಾ, ಮಲಯಾಳಂ ಭಾಷೆಗಳನ್ನು ಸಹ ಈ ತಂತ್ರಜ್ಞಾನದಲ್ಲಿ ಅಳವಡಿಕೆ ಮಾಡಲಾಗಿದೆ. ಕನ್ನಡದಲ್ಲಿ ಈ ಸೇವೆಯನ್ನು ಪಡೆದುಕೊಳ್ಳುವವರಿಗೆ ಸಂಪೂರ್ಣ ಕನ್ನಡದಲ್ಲಿಯೇ ಸೇವೆ ದೊರೆಯುವಂತೆ ವ್ಯವಸ್ಥೆಯನ್ನು ರೂಪಿಸಲಾಗಿದೆ. ವಲಸಿಗರು ಸುಲಭವಾಗಿ ದೇಶದೆಲ್ಲೆಡೆ ಈ ಸೇವೆಯ ಲಾಭವನ್ನು ಪಡೆಯುವಂತಾಗಬೇಕು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ಕ್ರಮವನ್ನು ಅಳವಡಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.