ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಾಲಯದ ನಿರ್ವಹಣಾ ಹೊಣೆಯನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯ ಸುಪರ್ಧಿಗೆ ಒದಗಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ದೇಗುಲದ ನಿರ್ವಹಣಾ ಹೊಣೆಯನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್ 2018 ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಪೀಠ ಈ ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ.
ದೇವಾಲಯದ ನಿರ್ವಹಣಾ ಹೊಣೆಯನ್ನು ನಿವೃತ್ತ ನ್ಯಾಯಮೂರ್ತಿ ಬಿ ಎನ್ ಶ್ರೀಕೃಷ್ಣ ಅವರ ನೇತೃತ್ವದ ಸಮಿತಿಗೆ ವಹಿಸುವ ಮೂಲಕ ಸಮಸ್ಯೆಗೆ ಮಧ್ಯಂತರ ಪರಿಹಾರವನ್ನು ನೀಡಲಾಗಿದೆ. ಈ ಸಮಿತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಕುಮಟಾದ ಸಹಾಯಕ ಆಯುಕ್ತರು, ಇಬ್ಬರು ತಜ್ಞರು ಸೇರಿದಂತೆ ಮತ್ತಿಬ್ಬರು ಸದಸ್ಯರು ಇರಲಿದ್ದಾರೆ. 15 ದಿನಗಳೊಳಗಾಗಿ ರಾಮಚಂದ್ರಾಪುರ ಮಠದಿಂದ ದೇಗುಲದ ಆಡಳಿತವನ್ನು ತನ್ನ ವಶಕ್ಕೆ ತೆಗೆದುಕೊಳ್ಳುವಂತೆಯೂ ಪೀಠ ಸಮಿತಿಗೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.