ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಸಂಬಂಧ ಚರ್ಚೆ ನಡೆಸಲು ನಾಳೆ ಸರ್ವ ಪಕ್ಷಗಳ ಸಭೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕೊರೋನಾ ಸೋಂಕು ತಗುಲಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಸಂಜೆ 4.30 ರ ಸುಮಾರಿಗೆ ಈ ಸಭೆ ನಡೆಯಲಿದೆ. ರಾಜ್ಯಪಾಲ ವಜೂಭಾಯ್ ವಾಲಾ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಅಳವಡಿಸಬಹುದಾದ ಕಠಿಣ ಕ್ರಮಗಳ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಎಲ್ಲಾ ಪಕ್ಷಗಳ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.