ನವದೆಹಲಿ: ಭಾರತವು ಶೀಘ್ರದಲ್ಲೇ ವಿಶ್ವದ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ಗಳಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಹೇಳಿದ್ದಾರೆ.
ಅಮೆಜಾನ್ನ ಸಂಭವ್ ಶೃಂಗಸಭೆಯನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಿದ ಗಡ್ಕರಿ, ಮುಂದಿನ ಆರು ತಿಂಗಳ ಒಳಗಡೆ ಲಿಥಿಯಂ-ಐಯಾನ್ ಬ್ಯಾಟರಿಗಳು ದೇಶದಲ್ಲಿ ಸಂಪೂರ್ಣವಾಗಿ ತಯಾರಾಗಲಿವೆ ಎಂಬ ವಿಶ್ವಾಸವಿದೆ, ಇದು ಭಾರತದ ಇವಿ ಕಾರ್ಯಸೂಚಿಗೆ ಹೆಚ್ಚು ಅಗತ್ಯವಾದ ಉತ್ತೇಜನವನ್ನು ನೀಡುತ್ತದೆ ಎಂದಿದ್ದಾರೆ.
“ಭಾರತವು ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುವತ್ತ ಮುನ್ನಡೆಯುತ್ತಿದೆ. ಕಾಲಕ್ರಮೇಣ ನಾವು ವಿಶ್ವದ ಅಗ್ರಗಣ್ಯ ಎಲೆಕ್ಟ್ರಿಕ್ ವಾಹನ (ಇವಿ) ತಯಾರಕರಾಗುತ್ತೇವೆ. ಎಲ್ಲಾ ಹೆಸರಾಂತ ಬ್ರಾಂಡ್ಗಳು ಭಾರತದಲ್ಲಿವೆ” ಎಂದು ಹೇಳಿದ್ದಾರೆ.
ಹೈಡ್ರೋಜನ್ ಮತ್ತು ಆಮ್ಲಜನಕದ ನಡುವಿನ ರಾಸಾಯನಿಕ ಕ್ರಿಯೆಗಳನ್ನು ವಿದ್ಯುತ್ ಶಕ್ತಿಯನ್ನು ಉತ್ಪಾದಿಸಲು ಬಳಸುವ ಫ್ಯೂಸಿಲ್ ಇಂಧನಗಳ ಬಳಕೆಯನ್ನು ತೆಗೆದುಹಾಕುವ ಹೈಡ್ರೋಜನ್ ಇಂಧನ ಸೆಲ್ ತಂತ್ರಜ್ಞಾನವನ್ನು ಪ್ರಾರಂಭಿಸಲು ಸರ್ಕಾರವು ಕೆಲಸ ಮಾಡುತ್ತಿದೆ ಎಂಬ ಅಂಶವನ್ನು ಕೇಂದ್ರ ಸಚಿವರು ಒತ್ತಿ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಭಾರತದಲ್ಲಿ ಅಲ್ಯೂಮಿನಿಯಂ-ಏರ್ ವ್ಯವಸ್ಥೆಗಳನ್ನು ನಿರ್ಮಿಸಲು ಸರ್ಕಾರಿ ತೈಲ ಕಂಪನಿ ಇಂಡಿಯನ್ ಆಯಿಲ್ ಮತ್ತು ಇಸ್ರೇಲಿ ಸ್ಟಾರ್ಟ್ ಅಪ್ ಕಂಪನಿಯಾದ ಫಿನರ್ಜಿ ನಡುವೆ ಪಾಲುದಾರಿಕೆಯನ್ನು ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.