ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಲಸಿಕೆ ನೀಡಿಕೆಯನ್ನು ಸಹ ಕೇಂದ್ರ ಸರ್ಕಾರ ಚುರುಕುಗೊಳಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಕಟಣೆ ಹೊರಡಿಸಿರುವ ಕೇಂದ್ರ, ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆಗಳನ್ನು ನೀಡಲಾಗುವುದು ಎಂದು ತಿಳಿಸಿದೆ. ಜೊತೆಗೆ 18 ವರ್ಷ ದಾಟಿದ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಸೂಚಿಸಿದೆ.
ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ಗೆ, ಆ ಬಳಿಕ 60 ವರ್ಷ ಮೇಲ್ಪಟ್ಟವರಿಗೆ, ಆ ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಇದೀಗ 18 ವರ್ಷ ದಾಟಿದ ಎಲ್ಲರಿಗೂ ಮೇ 1 ರಿಂದ ತೊಡಗಿದಂತೆ ಕೊರೋನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.