ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕಿನ ವೇಗ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಹಲವು ಮಂದಿ ಸೋಂಕಿಗೆ ತುತ್ತಾಗಿ ನರಳುವಂತಾಗಿದೆ. ಈ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಡೀ ಜಗತ್ತು ಬಹು ದೊಡ್ಡ ಸವಾಲು ಎದುರಿಸುತ್ತಿದೆ. ರಾಜ್ಯವೂ ಇದಕ್ಕೆ ಹೊರತಾಗಿಲ್ಲ. ಸದ್ಯ ರಾಜ್ಯ ಸರ್ಕಾರ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಸೋಂಕಿತರ ಚೇತರಿಕೆಗಾಗಿ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿಯೂ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ಕೊರೋನಾ ಮಾದರಿ ಪರೀಕ್ಷೆ ನಡೆಸುವ ಗುರಿಯನ್ನು ಸಹ ಸರ್ಕಾರ ಹೆಚ್ಚಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ನೆರೆ ರಾಜ್ಯಗಳಿಂದ ರಾಜ್ಯದೊಳಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ವರದಿ ತರುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಕೊರೋನಾ ಸೋಂಕಿತರಿಗೆ ರಾಜ್ಯದೊಳಗೆ ಪ್ರವೇಶಿಸಲು ಅವಕಾಶವಿಲ್ಲ. ಜನರಲ್ಲಿ ಕೊರೋನಾ ಸಂಬಂದ ಮುಂಜಾಗ್ರತೆ ವಹಿಸುವಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಕೊರೋನಾ ಲಸಿಕೆ ಹಾಕಿಸಿಕೊಳ್ಳುವ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸುವುದಕ್ಕೆ ಸಂಬಂಧಿಸಿದಂತೆಯೂ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಒಟ್ಟಾರೆಯಾಗಿ ಕೊರೋನಾ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಜಅರಿಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.