ಬೆಂಗಳೂರು: ಕೊರೋನಾ ಸೋಂಕು ಹರಡುವ ಗತಿ ವೇಗ ಪಡೆದಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳು, ಆಕ್ಸಿಜನ್ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ಉದ್ಬವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಸೋಂಕಿಗೆ ತುತ್ತಾದ ಜನರಿಗೆ ʼಹೋಂ ಕೇರ್ʼ ಪ್ಯಾಕೇಜ್ಗಳನ್ನು ನೀಡಲು ಮುಂದಾಗಿವೆ. ಸೋಂಕು ತಗುಲಿದ್ದರೂ, ಸೋಂಕಿನ ಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಳ್ಳದೇ ಇರುವವರಿಗೆ ಮನೆಯಲ್ಲಿಯೇ ಆರೈಕೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಅವಕಾಶ ನೀಡಿದ್ದು, ಇದಕ್ಕೆ ಪೂರಕ ಎಂಬಂತೆ ಸದ್ಯ ಸೋಂಕಿತರಿಗೆ ಹೋಂ ಕೇರ್ ಪ್ಯಾಕೇಜ್ ಒದಗಿಸುವ ನಿಟ್ಟಿನಲ್ಲಿಯೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಪ್ಯಾಕೇಜ್ನಿಂದಾಗಿ 90% ಗಳಷ್ಟು ಸೋಂಕಿತರು ಮನೆ ಆರೈಕೆಯನ್ನೇ ಹೆಚ್ಚು ಬಯಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ 60 ವರ್ಷ ಮೇಲ್ಪಟ್ಟ ಸೋಂಕಿತರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಇಳಿಕೆಯಿಂದಾಗಿ ಹಲವು ಸಮಸ್ಯೆಗಳು ಕಾಣಿಸುತ್ತಿದ್ದು, ಅಂತಹವರು ಆಸ್ಪತ್ರೆಗಳಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಮುಂದಾಗುತ್ತಿದ್ದಾರೆ. ಸೋಂಕಿತರ ಹೆಚ್ಚಳದಿಂದಾಗಿ ರಾಜ್ಯದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಪರಿಹಾರವಾಗಿ ನಗರದ ಕೆಲವು ಆಸ್ಪತ್ರೆಗಳು ಸೋಂಕಿತರಿಗೆ 14 ದಿನಗಳ ಕಾಲ ಹೋಂ ಐಸೋಲೇಷನ್ ಸೇವೆ ನೀಡಲು ಮುಂದೆ ಬಂದಿವೆ. ಮತ್ತೆ ಕೆಲ ಆಸ್ಪತ್ರೆಗಳು 7 ದಿನಗಳ ಕಾಲ ಸೇವೆ ನೀಡಲು ಮುಂದೆ ಬಂದಿವೆ. ರೋಗಿಗಳ ಅಗತ್ಯತೆಗೆ ಅನುಗುಣವಾಗಿ ಈ ಸೇವೆಯನ್ನು ಒದಗಿಸಲಾಗುತ್ತದೆ ಎಂದು ಆಸ್ಪತ್ರೆಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.