ಬೆಂಗಳೂರು: ರಾಜ್ಯದಲ್ಲಿ 1 – 9 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆಯೇ ಪಾಸ್ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಇದುವರೆಗೆ ನಡೆದಿರುವ ತರಗತಿಗಳ ಆಧಾರದ ಮೇಲೆ ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಏಪ್ರಿಲ್ 30 ರ ಒಳಗೆ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆಯನ್ನು ನೀಡಿದೆ. ಈ ಸಂಬಂಧ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳ ಜೊತೆಗ ಚರ್ಚಿಸಿದ್ದು, ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಮೇ 1 ರಿಂದ ಜೂನ್ 14 ರವರೆಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಕೋನದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.