News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೈದ್ಯಕೀಯ ಆಮ್ಲಜನಕದ ಪೂರೈಕೆ 2 ತಿಂಗಳ ಅವಧಿಯಲ್ಲಿ ಸುಮಾರು 4 ಪಟ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆ ಕೇವಲ 2 ತಿಂಗಳ ಅವಧಿಯಲ್ಲಿ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಕೊರೋನಾವೈರಸ್‌ ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯನ್ನು ಹೆಚ್ಚಳ ಮಾಡಲಾಗಿದೆ.

ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನಾ ಸಾಮರ್ಥ್ಯವು ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ 1 ಸಾವಿರ 273 ಮೆಟ್ರಿಕ್ ಟನ್‌ಗಳಿಂದ ಇತ್ತೀಚಿನ ದಿನಗಳಲ್ಲಿ ದಿನಕ್ಕೆ 4 ಸಾವಿರ 739 ಮೆಟ್ರಿಕ್ ಟನ್‌ಗಳಿಗೆ ಏರಿದೆ ಎಂದು ವರದಿಗಳು ತಿಳಿಸಿವೆ.

ಕೊರೋನಾ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಅವಿರತ ಪರಿಶ್ರಮಪಡುತ್ತಿದೆ. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಉತ್ತೇಜಿಸಲು ಹಲವು ಕ್ರಮಕೈಗೊಂಡಿದೆ.  ಏಪ್ರಿಲ್ 22ರಿಂದ ಮುಂದಿನ ಆದೇಶ ಬರುವವರೆಗೆ ಕೈಗಾರಿಕಾ ಉದ್ದೇಶಗಳಿಗೆ ಆಮ್ಲಜನಕ ಪೂರೈಕೆಯನ್ನು ನಿಷೇಧಿಸಲಾಗಿದೆ.

ಪೀಡಿತ ರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕದ ಸುಗಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಮಯ ಸೂಕ್ತವಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಭರವಸೆ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top