ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಆಮ್ಲಜನಕ ಸಮಸ್ಯೆಯನ್ನು ಬಗೆಹರಿಸಲು ಪ್ರತ್ಯೇಕ ವಾರ್ ರೂಂ ರಚನೆ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಸೋಂಕಿತ ಚಿಕಿತ್ಸೆಗೆ ಆಮ್ಲಜನಕ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಈ ವಾರ್ ರೂಂ ಮಾಡಲಿದೆ. ಆಕ್ಸಿಜನ್ ಕೊರತೆಯಿಂದಾಗಿ ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ಆತಂಕ ಸೃಷ್ಟಿಸಿದೆ. ಆಕ್ಸಿಜನ್ ಪೂರೈಕೆ ಮಾಡುವುದು ಸದ್ಯದ ತುರ್ತು ಅಗತ್ಯವಾಗಿದೆ.ಇನ್ನು ಸರ್ಕಾರದ ಬಳಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಇದ್ದರೂ ಅದನ್ನು ಸಕಾಲಕ್ಕೆ ಪೂರೈಕೆ ಮಾಡುವುದು ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಖಾಸಗಿ ಆಸ್ಪತ್ರೆಗಳು ಸಿಲಿಂಡರ್ ಆಕ್ಸಿಜನ್ ಅವಲಂಬನೆ ಮಾಡಿರುವ ಕಾರಣ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಆಕ್ಸಿಜನ್ ಸಿಲಿಂಡರ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಆಕ್ಸಿಜನ್ ವಾರ್ ರೂಂ ಆರಂಭ ಮಾಡಲಾಗಿದ್ದು, ಈ ವಾರ್ ರೂಂ ದಿನದ 24 ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳ ಸಂಘ ಆಕ್ಸಿಜನ್ ಕೊರತೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವರಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಆಕ್ಸಿಜನ್ ಸಮಸ್ಯೆ ನಿವಾರಣೆ ಮಾಡುವಂತೆಯೂ ಮನವಿ ಮಾಡಿತ್ತು. ಆಕ್ಸಿಜನ್ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಇದರನ್ವಯ ಸರ್ಕಾರ ವಾರ್ ರೂಂ ಆರಂಭಿಸಲಾಗಿದೆ. ಬೆಂಗಳೂರು ಅರಮನೆ ಮೈದಾನ ರಸ್ತೆಯ ಔಷಧ ನಿಯಂತ್ರಣ ಕಚೇರಿಯಲ್ಲಿ ವಾರ್ ರೂಂ ರಚನೆ ಮಾಡಲಾಗಿದೆ. 080-22262846 ಅಥವಾ 9448478874 ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಅಗತ್ಯ ಆಕ್ಸಿಜನ್ ಸಕಾಲದಲ್ಲಿ ಪಡೆದುಕೊಳ್ಳಬಹುದು ಎಂದು ಸೂಚಿಸಲಾಗಿದೆ.
In order to facilitate availability of medical oxygen for treatment of Covid-19 patients a dedicated war room has been created at the Office of the Drugs Controller.
ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಔಷಧ ನಿಯಂತ್ರಕರ ಕಛೇರಿಯಲ್ಲಿ ವಾರ್ ರೂಮ್ ರಚಿಸಲಾಗಿದೆ. pic.twitter.com/DnIUkvpoxj
— Dr Sudhakar K (@mla_sudhakar) April 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.