ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಅನೇಕ ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಾಡುವ ಸವಾಲನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಗರ ಪ್ರದೇಶ, ಹಳ್ಳಿಗಳಿಂದ 1 ಕಿಮೀ ದೂರದಲ್ಲಿ ತಾತ್ಕಾಲಿಕ ಸ್ಮಶಾನಗಳನ್ನು ನಿರ್ಮಿಸಲು ಸೂಚಿಸಿದೆ.
ಈ ಆದೇಶದನ್ವಯ ತಕ್ಷಣವೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೂ ಕ್ಷಿಪ್ರಗತಿಯಲ್ಲಿ ಕ್ರಮ ವಹಿಸುವಂತೆ ಸರ್ಕಾರ ಸೂಚಿಸಿದೆ. ಕೊರೋನಾ ಸೋಂಕಿಗೆ ತುತ್ತಾಗಿ ಮೃತ ಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಶವ ಸಂಸ್ಕಾರಕ್ಕೂ ಸರಿಯಾಗಿ ಅನುಕೂಲಗಳಿಲ್ಲ ಎಂಬ ಸಮಸ್ಯೆಯನ್ನರಿತು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿಯೂ ವಿಪಕ್ಷ ನಾಯಕರು ರಾಜ್ಯದಲ್ಲಿ ಅಂತ್ಯಸಂಸ್ಕಾರಕ್ಕೂ ಸಮಸ್ಯೆಯಾಗುತ್ತಿರುವ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಅಲ್ಲದೆ ಬೆಂಗಳೂರು ನಗರದಲ್ಲಿಯೇ ಚಿತಾಗಾರಗಳಲ್ಲಿ ಅಂತ್ಯ ಸಂಸ್ಕಾರ ನಡೆಸಲು ಶವಗಳ ಸಾಲು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಯ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರ ಶಾಶ್ವತ ಕ್ರಮಕ್ಕೆ ಮುಂದಾಗಿದೆ. ನಗರ, ಹಳ್ಳಿಗಳಲ್ಲಿರುವ ಸರ್ಕಾರಿ ಜಮೀನುಗಳನ್ನು ಇದಕ್ಕಾಗಿ ಬಳಕೆ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.