ಬೆಂಗಳೂರು: ಕೊರೋನಾ ಎರಡನೇ ಅಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ನಿನ್ನೆಯಷ್ಟೇ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಡಿಜಿ, ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಇತರ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕೊರೋನಾ ರೂಲ್ಸ್ಗಳನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಹೇಗೆ ಎಂಬ ನಿಟ್ಟಿನಲ್ಲಿ ಈ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆಗಳೂ ಇವೆ.
ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ತರಲಾಗಿದ್ದು, ಇದನ್ನು ಸೂಕ್ತವಾಗಿ ಪಾಲಿಸುವಂತೆ ಮಾಡುವಲ್ಲಿಯೂ ಸವಾಲುಗಳಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.