ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗವು ಮುಂದೂಡಿಕೆಯ ಪ್ರಕಟಣೆಯನ್ನು ಹೊರಡಿಸಿದೆ.
ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಎ. 22 – 30 ರ ವರೆಗೆ ನಡೆಸಲು ಈ ಹಿಂದೆಯೇ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ವೇಗ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ಹಿಂದೆಯೂ ದ್ವಿತೀಯ ಅಧಿವೇಶನದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ದಿ. 17.4.2021 ರಂದು ಕರ್ನಾಟಕದ ಬಸವ ಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಬಳಿಕ ಎ. 16 ಮತ್ತು 17 ರಂದು ಈ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.