ಬೆಂಗಳೂರು: ರಾಜ್ಯದಲ್ಲಿ 20 – 30 ರಷ್ಟು ಹಾಸಿಗೆ ಸಾಮರ್ಥ್ಯ ಹೊಂದಿರುವ ನರ್ಸಿಂಗ್ ಹೋಂಗಳು ಹಣದಾಹದಿಂದ ಕೊರೋನಾ ಸೋಂಕಿತರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತಿಲ್ಲ. ಈ ಸಂಬಂಧ ಸರ್ಕಾರ ಕಾನೂನೊಂದನ್ನು ಜಾರಿಗೆ ತರಲಿರುವುದಾಗಿ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿತರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ಇಂತಹ ನಿರ್ಬಂಧಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ. ದೊಡ್ಡ ಆಸ್ಪತ್ರೆಗಳು ತಮ್ಮದೇ ಆದ ಆಮ್ಲಜನಕ ಘಟಕಗಳನ್ನು ಹೊಂದಿರುತ್ತವೆ. ಆದರೆ ಸಣ್ಣ ಆಸ್ಪತ್ರೆಗಳಲ್ಲಿ ಇದು ಸಾಧ್ಯವಾಗುವುದಿಲ್ಲ. ಪ್ರತಿನಿತ್ಯ 3 ಸಿಲಿಂಡರ್ ಬೇಕಾಗಿದ್ದು, ಸಕಾಲದಲ್ಲಿ ಆಕ್ಸಿಜನ್ ಸಿಲಿಂಡರ್ಗಳು ಲಭಿಸದೇ ಹೋದಲ್ಲಿ ಸಮಸ್ಯೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊರೋನಾ ಹೊರತಾದಂತೆ ಉಳಿದ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲು ಅನುಮತಿ ಒದಗಿಸುವುದಾಗಿ ಅವರು ತಿಳಿಸಿದರು.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಆಕ್ಸಿಜನ್, ಹಾಸಿಗೆಗಳ ಕೊರತೆ ಉಂಟಾಗುತ್ತಿದೆ. ಇವೆಲ್ಲವನ್ನೂ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.