ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಆ ಮೂಲಕ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಡಳಿತಗಳಿಗೆ ಅಗತ್ಯ ಸಹಕಾರ ಒದಗಿಸಬೇಕು. ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಕೊಡಿಸಲು ತ್ವರಿತ ಕ್ರಮ ಕೈಗೊಳ್ಳಬೇಕು. ಪರಿಸ್ಥಿತಿ ಕೈ ಮೀರದಂತೆ ಅಗತ್ಯ ಎಚ್ಚರ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಪ್ರಭಾವ ಜೋರಾಗಿದ್ದು, ಇದರಿಂದಾಗಿ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸೂಚನೆಯನ್ನೂ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.