ನವದೆಹಲಿ: ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗುಜರಾತಿನ ತನ್ನ ಜಾಮ್ನಗರ್ ಆಯಿಲ್ ರಿಫೈನರಿಯಲ್ಲಿ ದಿನಕ್ಕೆ 700 ಟನ್ಗಳಷ್ಟು ವೈದ್ಯಕೀಯ ದರ್ಜೆಯ ಆಮ್ಲಜನಕವನ್ನು ಉತ್ಪಾದಿಸಲು ಅಗತ್ಯವಾದ ಸಾಧನಗಳನ್ನು ಸ್ಥಾಪಿಸಿದೆ ಮತ್ತು ಕೋವಿಡ್ -19 ನಿಂದ ತೀವ್ರ ಬಾಧಿಸಲ್ಪಟ್ಟ ರಾಜ್ಯಗಳಿಗೆ ಉಚಿತವಾಗಿ ಆಮ್ಲಜನಕ ಸರಬರಾಜು ಮಾಡುತ್ತಿದೆ.
ಆರಂಭದಲ್ಲಿ, ಜಾಮ್ನಗರ ಆಯಿಲ್ ರಿಫೈನರಿ 100 ಟನ್ ವೈದ್ಯಕೀಯ ದರ್ಜೆಯ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು, ಇದನ್ನು ಈಗ 700 ಟನ್ಗಳಿಗೆ ಹೆಚ್ಚಿಸಲಾಗಿದೆ ಮತ್ತು ಉತ್ಪಾದನಾ ಸಾಮರ್ಥ್ಯವನ್ನು 1,000 ಟನ್ಗಳಿಗೆ ಹೆಚ್ಚಿಸುವ ಯೋಜನೆಯನ್ನು ಕಂಪನಿಯು ಹೊಂದಿದೆ.
ಉತ್ಪಾದಿತ ವೈದ್ಯಕೀಯ ದರ್ಜೆಯ ಆಮ್ಲಜನಕವನ್ನು ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಿಗೆ ಪೂರೈಸಲಾಗುತ್ತಿದ್ದು, ಇದರಿಂದ ಪ್ರತಿದಿನ 70,000 ಕ್ಕೂ ಹೆಚ್ಚು ಗಂಭೀರವಾಗಿರುವ ರೋಗಿಗಳಿಗೆ ಆಮ್ಲಜನಕ ಸಿಗುತ್ತದೆ ಎಂದು ವರದಿಗಳು ಹೇಳಿವೆ.
ಮೈನಸ್ 183 ಡಿಗ್ರಿ ಸೆಲ್ಸಿಯಸ್ನಲ್ಲಿ ವಿಶೇಷ ಟ್ಯಾಂಕರ್ಗಳಲ್ಲಿ ಸಾಗಣೆ ಸೇರಿದಂತೆ ಆಮ್ಲಜನಕದ ಸಂಪೂರ್ಣ ಪೂರೈಕೆಯನ್ನು ರಾಜ್ಯ ಸರ್ಕಾರಗಳಿಗೆ ಯಾವುದೇ ವೆಚ್ಚವಿಲ್ಲದೆ ನೀಡಲಾಗುತ್ತಿದೆ ಎಂಬುದು ಗಮನಾರ್ಹ.
ಗುಜರಾತ್ನ ಜಾಮ್ನಗರದಲ್ಲಿ ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾ ಸಂಕೀರ್ಣವನ್ನು ನಿರ್ವಹಿಸುತ್ತಿರುವ ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಸಂಸ್ಥೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನೆರವು ನೀಡುವಲ್ಲಿ ಮುಂಚೂಣಿಯಲ್ಲಿದೆ.
ಕಳೆದ ವರ್ಷದ ಲಾಕ್ಡೌನ್ ಸಮಯದಲ್ಲಿ, ಕಂಪನಿಯು 5.5 ಲಕ್ಷ ಲೀಟರ್ ಉಚಿತ ಇಂಧನವನ್ನು ಒದಗಿಸಿತ್ತು, 18 ರಾಜ್ಯಗಳ 249 ಜಿಲ್ಲೆಗಳಿಗೆ 14,000 ಕ್ಕೂ ಹೆಚ್ಚು ಆಂಬುಲೆನ್ಸ್ ನೆರವು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.