ಚೆನ್ನೈ: ಚೆನ್ನೈ ನಗರದಲ್ಲಿ 40 ಮೈಕ್ರಾನ್ಗಿಂತಲೂ ಕಡಿಮೆ ದಪ್ಪದ ಪ್ಲಾಸ್ಟಿಕ್ ಚೀಲಗಳ ಹಾಗೂ ಪಾಲೀಮರ್ ಆಧಾರಿತ ವಸ್ತುಗಳನ್ನು ನಿಷೇಧಿಸಲಾಗಿದೆ. ಈ ಪ್ರಕ್ರಿಯೆಯು ಆ.15ರಿಂದ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ.
ಚೆನ್ನೈ ಮಹಾನಗರಪಾಲಿಕೆಯು ಈ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಯಸಿದೆ. ಆದರೆ ದೆಹಲಿ ನಂತರ ದೇಶದಲ್ಲೇ ಅತಿ ಹೆಚ್ಚು ಪ್ಲಾಸ್ಟಿಕ್ ಬಳಕೆಯಾಗುತ್ತಿರುವ ಈ ನಗರದಲ್ಲಿ ನಿತ್ಯ 429 ಟನ್ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ದೆಹಲಿಯಲ್ಲಿ 689 ಟನ್ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ.
ಪ್ಲಾಸ್ಟಿಕ್ ನಿಷೇಧವನ್ನು ಈ ಹಿಂದೆಯೇ ಮಾಡಲಾಗಿತ್ತಾದರೂ, ಇಲ್ಲಿಯ ಸ್ಥಳೀಯ ಸಂಸ್ಥೆಗಳು ಇದನ್ನು ಪ್ಲಾಸ್ಟಿಕ್ ತ್ಯಾಜ್ಯ (ವ್ಯವಸ್ಥೆ) ನಿಯಮ 2011ರ ಈ ಯೋಜನೆಯನ್ನು ಖಾತ್ರಿಪಡಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆ ಸರಿಯಾದ ರೀತಿಯಲ್ಲಿ ಫಲ ನೀಡದೇ ಇದ್ದುದರಿಂದ ಪ್ಲಾಸ್ಟಿಕ್ ನಿಷೇಧದ ನೀತಿ ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು. ಅಲ್ಲದೇ ಬಟ್ಟೆ ಅಥವಾ ಕಾಗದದಿಂದ ತಯಾರಿಸಲಾದ ಚೀಲಗಳನ್ನೇ ಬಳಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದರ ಜೊತೆಗೆ ಥರ್ಮೋಕಾಲ್, ಅಲುಮಿನಿಯಮ್ ಫಾಯಿಲ್, ಸ್ಟಿರೋಫೋಮ್ ಲೋಟಗಳು ಹಾಗೂ ತಟ್ಟೆಗಳನ್ನೂ ನಿಷೇಧಿಸಲು ಸರ್ಕಾರ ಯೋಚಿಸಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.