ಬೆಂಗಳೂರು: ನಗರದಲ್ಲಿ ಜನರ ಸಂಚಾರಕ್ಕಾಗಿ ಇರುವ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಬೆಂಗಳೂರಿನ ವಕೀಲ ರಾಮಚಂದ್ರ ರೆಡ್ಡಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಮಹತ್ವದ ಆದೇಶವನ್ನು ಹೊರಡಿಸಿದೆ.
ಪಾದಚಾರಿ ಮಾರ್ಗಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದು ಕಾನೂನು ಬಾಹಿರ. ಈ ಮಾರ್ಗಗಳು ಇರುವುದು ಜನರು ಯಾವುದೇ ಅಡೆತಡೆಗಳಿಲ್ಲದೆ ಸುರಕ್ಷಿತರಾಗಿ ನಡೆದಾಡುವುದಕ್ಕೆ, ಈ ಹಿನ್ನೆಲೆಯಲ್ಲಿ ಪಾದದಚಾರಿ ದಾರಿಗಳಲ್ಲಿ ವಾಹನ ನಿಲುಗಡೆ ಮಾಡಿದವರಿಂದ ಸಂಡ ವಸೂಲಿ ಮಾಡುವಂತೆ ಸೂಚಿಸಿದೆ. ಹಾಗೆಯೇ ಫೂಟ್ಪಾತ್ ಮೇಲೆ ವಾಹನಗಳನ್ನು ಇಲ್ಲಿಸಿ ಸಾರ್ವಜನಿಕರಿಗ ಅಡ್ಡಿಪಡಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಬೇಕು ಎಂಬುದಾಗಿಯೂ ಕೋರ್ಟ್ ಸೂಚಿಸಿದೆ. ಈ ಬಗ್ಗೆ ಸರ್ಕಾರ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿಗೆ ಸುತ್ತೋಲೆ ಹೊರಡಿಸುವಂತೆಯೂ ಹೈಕೋರ್ಟ್ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.