ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತರಾದವರ ಶವ ಸಂಸ್ಕಾರದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರ್ಧಿಷ್ಟ ಚಿತಾಗಾರಗಳ ಮೇಲಾಗುತ್ತಿರುವ ಹೊರೆ ತಪ್ಪಿಸುವ ನಿಟ್ಟಿನಲ್ಲಿ ನಗರದ ಎಲ್ಲಾ ವಿದ್ಯುತ್ ಚಿತಾಗಾರಗಳಲ್ಲಿಯೂ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟ ಶವಗಳ ಸಂಸ್ಕಾರ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಈವರೆಗೆ ಆರಂಭದಲ್ಲಿ ನಾಲ್ಕು ಮತ್ತು ಆ ಬಳಿಕ ಏಳು ವಿದ್ಯುತ್ ಚಿತಾಗಾರಗಳಲ್ಲಿ ಕೊರೋನಾ ಸೋಂಕಿನಿಂದ ಮರಣವನ್ನಪ್ಪಿದವರ ಶವ ಸಂಸ್ಕಾರ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಶವ ಸಂಸ್ಕಾರದ ಸಮಸ್ಯೆ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಎಲ್ಲಾ 12 ಚಿತಾಗಾರಗಳಲ್ಲಿಯೂ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟವರ ಶವಗಳ ಸಂಸ್ಕಾರ ನಡೆಸಲು ಆದೇಶ ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನೂ ವಿಧಿಸಲಾಗಿದ್ದು, ವಿದ್ಯುತ್ ಚಿತಾಗಾರ ಸಿಬ್ಬಂದಿಗಳ ವೇತನ ಬಾಕಿ ಬಿಡುಗಡೆ, ಶವ ಸಂಸ್ಕಾರ ವಿಳಂಬವಾಗದಂತೆ, ಬೆಳಗ್ಗೆ 8 ರಿಂದ ರಾತ್ರಿ 8 ರ ವರೆಗೆ ಕಾರ್ಯ ನಿರ್ವಹಿಸುವ ಬಗ್ಗೆ, ಬೆಳಗ್ಗೆ 11 ರ ಒಳಗಾಗಿ ಹಿಂದಿನ ದಿನ ನಡೆದ ಶವ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಶವ ಸಾಗಾಟ ಮತ್ತು ಅಂತ್ಯಕ್ರಿಯೆಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂಬುದಾಗಿಯೂ ಬಿಬಿಎಂಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.