News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ: ಶೀಘ್ರ ನೋಂದಣಿ ಆರಂಭ

ನವದೆಹಲಿ: ಭಾರತದಲ್ಲಿ ಮೇ  1ರಿಂದ ಮೂರನೇ ಹಂತದ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ. ಇದರಡಿ ದೇಶದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಟ್ವಿಟ್ ಮೂಲಕ ಹರ್ಷವರ್ಧನ್ ಹೇಳಿದ್ದಾರೆ. ಇದಲ್ಲದೆ, ವ್ಯಾಕ್ಸಿನೇಷನ್ ನೋಂದಣಿ ಶೀಘ್ರದಲ್ಲೇ ಸರ್ಕಾರದ ಕೋ-ವಿನ್ ವೆಬ್‌ಸೈಟ್‌ನಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

“ಮೂರನೇ ಹಂತದ ಅಡಿಯಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ನೀವು 18 ವರ್ಷ ವಯಸ್ಸಿನವರಾಗಿದ್ದರೆ ಸಿದ್ಧರಾಗಿರಿ. ಕೋವಿಡ್‌ ಲಸಿಕೆ ನೋಂದಣಿ ಶೀಘ್ರದಲ್ಲೇ ಆರಂಭವಾಗುತ್ತದೆ.  http: //Cowin.gov.in ಗೆ ಭೇಟಿ ನೀಡಿ” ಎಂದು ಹೇಳಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top