ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗೆ 350 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ.
ರಾಜ್ಯದ ಕಂದಾಯ ಇಲಾಖೆ ಈ ಮೊತ್ತವನ್ನು ಬಿಡುಗಡೆ ಮಾಡಿದೆ. ಜೊತೆಗೆ ರಾಜ್ಯದ ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆಯೂ 266 ಕೋಟಿ ರೂಪಾಯಿ ಮೊತ್ತವನ್ನು ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಈ ಸಂಬಂಧ ಮಾತನಾಡಿರುವ ಸಚಿವ ಆರ್ ಅಶೋಕ್, ಕೊರೋನಾ ಸೋಂಕಿತರ ಔಷಧ, ಚಿಕಿತ್ಸೆ, ಕೆಲಸಗಾರರು ಕ್ವಾರಂಟೈನ್ಗೆ ಸಂಬಂಧಿಸಿದಂತೆ ಬಳಕೆ ಮಾಡಲು ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.