News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದೊಳಗೆ ಬರುವ ಪಾಕ್ ನುಸುಳುಕೋರರ ಪ್ರಯತ್ನ ವಿಫಲಗೊಳಿಸಿದ BSF

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿನ ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮೂವರು ಪಾಕಿಸ್ಥಾನಿ ನುಸುಳುಕೋರರು ಭಾರತದೊಳಗೆ ನುಸುಳಲು ನಡೆಸಿದ ಪ್ರಯತ್ನವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಿಫಲಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 10.15 ರ ಸುಮಾರಿಗೆ ಮೂರು ಜನರು ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸುತ್ತಿರುವುದನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಹಾರಿಪುರ ಗಡಿ ಹೊರಠಾಣೆ ಸ್ಥಳದಲ್ಲಿ ಬಿಎಸ್ಎಫ್ ಪಡೆಗಳು ನಿಯೋಜನೆಗೊಂಡು ಕಾರ್ಯಾಚರಣೆಗೆ ಇಳಿದ ನಂತರ ಮೂವರು ಒಳನುಸುಳುಕೋರರು ಹಿಂತಿರುಗಿದರು ಎಂದು ಅವರು ಹೇಳಿದರು.

ಈ ಪ್ರದೇಶದಲ್ಲಿ ಬಿಎಸ್ಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top