ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗವು ದೇಶವ್ಯಾಪಿ ವೇಗವಾಗಿ ಹರಡುತ್ತಿದ್ದು, ಈ ಸಂಬಂಧ ಸಮಸ್ಯೆಗಳು ಮತ್ತು ಪ್ರಶ್ನೆಗಳಿಗೆ ದೇಶದ ನಾಗರಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕರ್ನಾಟಕದ ವತಿಯಿಂದ ಪ್ರಾರಂಭಿಸಿರುವ ಸಹಾಯವಾಣಿಗೆ (082967 23451) ಹಾಗೂ ಬೆಂಗಳೂರು ಕೊರೋನಾ ವಾರ್ ರೂಂ ಸಹಾಯವಾಣಿಗೆ (918147474841 / 918105465006) ಇಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ, ಕೋಶಾಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯದರ್ಶಿ ಅರವಿಂದ ರೆಡ್ಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗದೀಶ್ ಚಂದ್ರ, ಪ್ರಶಾಂತ್ ಕೆ ವಿ, ಬೆಂಗಳೂರು ಕೇಂದ್ರ ಜಿಲ್ಲೆಯ ಅಧ್ಯಕ್ಷ ಅಭಿಲಾಷ, ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಪುನೀತ್, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಪ್ರಶಾಂತ್, ಬೆಂಗಳೂರು ಉತ್ತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ದರ್ಶನ್ ಅವರು ಉಪಸ್ಥಿತರಿದ್ದರು.
ಏಪ್ರಿಲ್ 27 ರಿಂದ ರಾಜ್ಯದಾದ್ಯಂತ ಪ್ಲಾಸ್ಮಾ ದೇಣಿಗೆ ಅಭಿಯಾನವನ್ನು ಯುವಮೋರ್ಚಾ ಪ್ರಾರಂಭಿಸಲಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕರೋನಾ ವಾಕ್ಸಿನೇಷನ್ ನೀಡಲು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಯುವಮೋರ್ಚಾ ಧನ್ಯವಾದಗಳನ್ನು ಸಮರ್ಪಿಸುತ್ತದೆ. ಕರ್ನಾಟಕದಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಬಯಸುವವರಿಗೆ ಯುವಮೋರ್ಚಾದ ವತಿಯಿಂದ ಸಹಾಯ ಮಾಡಲು ಉದ್ದೇಶಿಸಿದೆ ಎಂದು ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.