ಬೆಂಗಳೂರು: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಕರ್ನಾಟಕವೂ ಕೊರೋನಾ ಸೋಂಕಿನಿಂದ ತತ್ತರಿಸುವಂತಾಗಿದೆ. ಇಂತಹ ಕಠಿಣ ಸಮಯದಲ್ಲಿ ಸೋಂಕಿತ ಚಿಕಿತ್ಸೆಗೆ ಬಳಕೆ ಮಾಡುವ 25000 ವಯಲ್ ರೆಮ್ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಡಾ ಕೆ ಸುಧಾಕರ್ ಅವರು, ಕರ್ನಾಟಕಕ್ಕೆ ಏಪ್ರಿಲ್ 30ರವರೆಗೆ ಹಚ್ಚುವರಿಯಾಗಿ 25,000 ವಯಲ್ ರೆಮಿಸಿಡಿವಿರ್ ಔಷಧವನ್ನು ಹಂಚಿಕೆ ಮಾಡಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಕೇಂದ್ರ ಸಚಿವರುಗಳಾದ ಶ್ರೀ ಡಿ ವಿ ಸದಾನಂದ ಗೌಡ ಹಾಗೂ ಶ್ರೀ ಪ್ರಲ್ಹಾದ್ ಜೋಶಿ ಅವರ ಸಮಯೋಚಿತ ಸ್ಪಂದನೆಯಿಂದ ಕೋವಿಡ್ ವಿರುದ್ಧದ ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದ್ದು, ಆ ಮೂಲಕ ಧನ್ಯವಾದ ಸಮರ್ಪಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಬೆಂಗಳೂರಿನಲ್ಲಂತೂ ಕೊರೋನಾ ಸೋಂಕು ತಗುಲಿ ಜನರು ಚಿಕಿತ್ಸೆಗಾಗಿ ಹಾಸಿಗೆಗಳ ಕೊರತೆಯನ್ನೂ ಅನುಭವಿಸುವಂತಾಗಿದೆ. ಜೊತೆಗೆ ಕೊರೋನಾ ಚಿಕಿತ್ಸೆಗೆ ಬಳಕೆ ಮಾಡುವ ರೆಮ್ಡೆಸಿವಿರ್ ಔಷಧದ ಲಭ್ಯತೆಯೂ ಸಾಕಷ್ಟು ಪ್ರಮಾಣದಲ್ಲಿ ಇಲ್ಲವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ಹಂಚಿಕೆ ರಾಜ್ಯದ ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ ನೀಡಿದೆ ಎನ್ನಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.