ಬೆಂಗಳೂರು: ದೇಶದಲ್ಲಿ ಮೇ 1 ರಿಂದ ಆರಂಭವಾಗುವಂತೆ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಭರದ ಸಿದ್ಧತೆ ನಡೆಸುತ್ತಿದೆ.
18 ವರ್ಷ ಮೇಲ್ಪಟ್ಟವರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡುವ ಹಿನ್ನೆಲೆಯಲ್ಲಿ 400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಡೋಸ್ಗಳಷ್ಟು ಕೊರೋನಾ ಲಸಿಕೆಗಳನ್ನು ಖರೀದಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕೊರೋನಾ ಎರಡನೇ ಅಲೆಯ ಹೊಡೆತಕ್ಕೆ ಕರ್ನಾಟಕ ನಲುಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಯೋಜನೆ ಹೆಚ್ಚು ಮಹತ್ವ ಪಡೆಯಲಿದೆ.
ಮಾನ್ಯ ಮುಖ್ಯಮಂತ್ರಿ @BSYBJP ರವರು, ಮೊದಲ ಹಂತದಲ್ಲಿ, 400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಅನುಮೋದನೆ ನೀಡಿರುತ್ತಾರೆ. ರಾಜ್ಯದಲ್ಲಿ ಮೇ 1ನೇ ತಾರೀಖಿನಿಂದ, 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕಲು ಇದನ್ನು ಬಳಸಲಾಗುವುದು.#KarnatakaFightsCorona
— CM of Karnataka (@CMofKarnataka) April 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.