ಬೆಂಗಳೂರು: ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿರುವ, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿಯೇ ವಾಸ್ತವ್ಯದಲ್ಲಿದ್ದರೆ, ಅಂತಹ ವಿದ್ಯಾರ್ಥಿಗಳನ್ನು ಹಾಸ್ಟೆಲ್ನಿಂದ ಹೊರಕ್ಕೆ ಕಳುಹಿಸುವಂತಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೆ ಅಂತಹ ವಿದ್ಯಾರ್ಥಿಗಳನ್ನು ಹಾಸ್ಟೆಲ್ಗಳಲ್ಲಿಯೇ ಉಳಿಸಿಕೊಳ್ಳತಕ್ಕದ್ದು. ಜೊತೆಗೆ ಅವರಿಗೆ ಊಟ, ವಸತಿ ಜೊತೆಗೆ ಪ್ರಸ್ತುತ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲು ಅವರು ಹೇಳಿದ್ದಾರೆ. ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ರಣಕೇಕೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದರಿಂದಾಗಿ ಜನರ ಅರೋಗ್ಯದ ಜೊತೆಗೆ ಜೀವನ ನಿರ್ವಹಣೆಯ ಸವಾಲನ್ನೂಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶೈಕ್ಷಣಿಕ ಕ್ಷೇತ್ರಕ್ಕೂ ಇದು ಆಘಾತ ನೀಡಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಕ್ರಮವನ್ನು ಸರ್ಕಾರ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.