ನವದೆಹಲಿ: ದೇಶಾದ್ಯಂತ ಕೋವಿಡ್ ಎರಡನೇ ಅಲೆ ಚಂಡಮಾರುತದ ರೀತಿ ಅಪ್ಪಳಿಸಿ ಜನರ ಜೀವ ಹಿಂಡುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಸೃಷ್ಟಿಯಾಗುತ್ತಿದೆ ಎಂಬ ವರದಿಗಳೂ ಬರುತ್ತಿವೆ, ಈ ಹಿನ್ನೆಲೆಯಲ್ಲಿ ಭಾರತವು ಕೊರತೆಯನ್ನು ನೀಗಿಸಲು ಜರ್ಮನಿಯಿಂದ ಆಮ್ಲಜನಕ ಉತ್ಪಾದನಾ ಘಟಕಗಳು ಮತ್ತು ಕಂಟೇನರ್ಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.
23 ಮೊಬೈಲ್ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಜರ್ಮನಿಯಿಂದ ವಿಮಾನದಲ್ಲಿ ತರಿಸಲಾಗುತ್ತಿದೆ. ಇವುಗಳನ್ನು ಆಸ್ಪತ್ರೆಗಳಲ್ಲಿ ನಿಯೋಜಿಸಲಾಗುತ್ತದೆ ಮತ್ತು ಅಗತ್ಯವಿರುವವರಿಗೆ ಸಾಕಷ್ಟು ಆಮ್ಲಜನಕವನ್ನು ಒದಗಿಸುವುದನ್ನು ಖಚಿತಪಡಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಇದಲ್ಲದೆ, ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕವನ್ನು ಪೂರೈಸಲು ಭಾರತ ಹೆಚ್ಚಿನ ಸಂಖ್ಯೆಯ ಆಮ್ಲಜನಕ ಕಂಟೇನರ್ಗಳನ್ನು ಖರೀದಿ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಿತ್ರ ರಾಷ್ಟ್ರಗಳಿಂದ ಆಮ್ಲಜನಕ ಕಂಟೇನರ್ ಮತ್ತು ಉಪಕರಣಗಳನ್ನು ತರಲು ವಿಮಾನ ಹಾರಾಟಕ್ಕೆ ಭಾರತೀಯ ವಾಯುಸೇನೆಯನ್ನು ನಿಯೋಜಿಸಲು ಸರ್ಕಾರ ಯೋಜಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.