ಬೆಂಗಳೂರು: ರಾಜ್ಯದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕೆಎಸ್ಎಂಡಿಎಂಸಿ) ಗೆ ಸಂಬಂಧಿಸಿದಂತಹ ಮಾವಿನ ತಳಿಗಳನ್ನು ಅಂಚೆ ಕಚೇರಿಗಳ ಮೂಲಕ ಮಾರಾಟ ಮಾಡುವ, ಗ್ರಾಹಕರಿಗೆ ತಲುಪಿಸುವ ಸೇವೆಗೆ ಗುರುವಾರ ಬೇಂಗಳೂರು ಪೋಸ್ಟಲ್ ರೀಜನ್ನಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾವು ಬೆಳೆಗಾರರು ತಾವು ಬೆಳೆದ ಮಾವಿನ ತಳಿಗಳನ್ನು ಸಾಂಕೇತಿಕವಾಗಿ ಬೆಂಗಳೂರು ಅಂಚೆ ಇಲಾಖೆಯ ಕೇಂದ್ರ ಕಚೇರಿಯ ಪೋಸ್ಟ್ ಮಾಸ್ಟರ್ Sheuli Burman ಅವರಿಗೆ ಹಸ್ತಾಂತರಿಸುವ ಮೂಲಕ ಈ ಸೇವೆಗೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ KSMDMC ಅಧ್ಯಕ್ಷ ಕೆ ವಿ ನಾಗರಾಜು, ನಿಗಮದ ಮ್ಯಾನೇಜಿಂಗ್ ಡೈರೆಕ್ಟರ್ ಸಿ ಜಿ ನಾಗರಾಜ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪೋಸ್ಟ್ ಮಾಸ್ಟರ್ Sheuli Burman ಕೊರೋನಾ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಬೆಳೆಗಾರರಿಗೆ ತಮ್ಮ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಿಕೊಳ್ಳುವುದು, ಗ್ರಾಹಕರಿಗೆ ತಲುಪಿಸುವುದು ಕಷ್ಟವಾಗಿದೆ. ಜೊತೆಗೆ ಪ್ರಸ್ತುತ ಮಧ್ಯವರ್ತಿಗಳೂ ಇಲ್ಲದಿರುವುದರಿಂದ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಾರುಕಟ್ಟೆ ಕಂಡುಕೊಳ್ಳುವುದೂ ಸುಲಭದ ಮಾತಲ್ಲ. ಹಿನ್ನೆಲೆಯಲ್ಲಿ ರಾಜ್ಯದ ಮಾವು ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಈ ಸೇವೆಯನ್ನು ಆರಂಭ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಸೇವೆಯನ್ನು ಬಳಸಿ ಮಾವಿನ ಹಣ್ಣುಗಳನ್ನು ಕೊಳ್ಳಲು ಬಯಸುವ ಗ್ರಾಹಕರು www.karsinimangoes.karnataka.gov.in ಅನ್ನು ಸಂಪರ್ಕಿಸುವಂತೆಯೂ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.