ಬೆಂಗಳೂರು: ಕೊರೋನಾ ಸೋಂಕು ದೇಶದ ಹಲವು ರಾಜ್ಯಗಳ ನಿದ್ದೆಗಡುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕವನ್ನೊಳಗೊಂಡಂತೆ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದರು.
ಈ ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಡಾ ಕೆ ಸುಧಾಕರ್ ಸೇರಿದಂತೆ ಇನ್ನಿತರ ಅಧಿಕಾರಿಗೂ ಭಾಗವಹಿಸಿದ್ದರು.
ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳು, ಅದರ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳು, ಆ ಕ್ರಮಗಳನ್ನು ಅಳವಡಿಕೆ ಮಾಡುವಲ್ಲಿ ಎದುರಾಗುತ್ತಿರುವ ಸವಾಲುಗಳಿಗೆ ಸಂಬಂಧಿಸಿದಂತೆ ಬಿಎಸ್ವೈ ಅವರು ಪ್ರಧಾನಿ ಮೋದಿ ಅವರಿಗೆ ಅಗತ್ಯ ಮಾಹಿತಿ ನೀಡಿದರು. ಜೊತೆಗೆ ಕೊರೋನಾ ನಿಯಂತ್ರಣ ಹಿನ್ನೆಲೆ ರಾಜ್ಯಕ್ಕೆ ಅಗತ್ಯವಿರುವ ಔಷಧ, ಆಕ್ಸಿಜನ್ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸುವಂತೆಯೂ ಸಿಎಂ ಅವರು ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ, ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಿಂದ ಭಾಗವಹಿಸಿದ ಮುಖ್ಯಮಂತ್ರಿ @BSYBJP ರವರು ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. (1/2) pic.twitter.com/33lqn5mzAq
— CM of Karnataka (@CMofKarnataka) April 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.