ಬೆಂಗಳೂರು: ಎಪ್ರಿಲ್ 28 ರಿಂದ ತೊಡಗಿದಂತೆ ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮತ್ತು ಮೇ 24 ರಿಂದ ತಾತ್ವಿಕ ಪರೀಕ್ಷೆಗಳನ್ನು ನಡೆಸುವುದಾಗಿ ನಿರ್ಧರಿಸಿರುವುದರಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ 50% ಗಳಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಉಪನ್ಯಾಸಕರ ಹಾಜರಾತಿಗೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಸೂಕ್ತ ವೇಳಾಪಟ್ಟಿಗಳನ್ನು ತಯಾರಿಸಿ, ಕೆಲಸ ಕಾರ್ಯಗಳನ್ನು ಹಂಚಿಕೆ ಮಾಡುವಂತೆಯೂ ಇಲಾಖೆ ಸೂಚಿಸಿದೆ. ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಈ ಸಂದರ್ಭದಲ್ಲಿ ಅಗತ್ಯ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸುವಂತೆಯೂ ಇಲಾಖೆ ಸೂಚನೆ ನೀಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಇದು ತಾತ್ಕಾಲಿಕವಾಗಿರಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸರಕಾರ, ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಸೂಚನೆ ಹಾಗೂ ನಿರ್ದೇಶನಗಳ ಪಾಲನೆ ಕಡ್ಡಾಯ. ಪ್ರೀ ರೆಕಾರ್ಡ್ ವಿಡಿಯೋ ತರಗತಿಗಳನ್ನು ಮುಂದುವರಿಸುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.