ಬೆಂಗಳೂರು: ನಗರದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್, ಐಸಿಯು, ವೆಂಟಿಲೇಟರ್, ಬೆಡ್ ಸಮಸ್ಯೆ ಎದುರಾಗುತ್ತಿದ್ದು, ಮುಂದಿನ ಒಂದು ವಾರಗಳಲ್ಲಿ 2500 ಐಸಿಯು ಬೆಡ್ ಹೊಂದಿರುವ ಮೆಕ್ ಶಿಫ್ಟ್ ಆಸ್ಪತ್ರೆ ಮಾಡುವುದಾಗಿ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಇನ್ನು ಕೆಲ ದಿನಗಳಲ್ಲಿ 2500 ಹಾಸಿಗೆಗಳುಳ್ಳ ಮೆಕ್ ಶಿಫ್ಟ್ ಆಸ್ಪತ್ರೆ ಆರಂಭ ಮಾಡಲಿದ್ದೇವೆ. ಇದರಲ್ಲಿ 100 ಹಾಸಿಗೆ ವೆಂಟಿಲೇಟರ್, 2000 ಹಾಸಿಗೆಗಳಲ್ಲಿ 800 ರಿಂದ 1000 ವೆಂಟಿಲೇಟರ್ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ. ನಮಗೆ 50 – 80 ವೆಂಟಿಲೇಟರ್ ಕೊರತೆ ಇದ್ದು ಈ ಸಮಸ್ಯೆ ಪರಿಹರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾಗಿ ಅವರು ತಿಳಿಸಿದ್ದಾರೆ.
ಈ ವಾರದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 500 ಹಾಸಿಗೆಗಳನ್ನು ಹೆಚ್ಚಳ ಮಾಡಲಾಗುತ್ತದೆ. ವಿದೇಶದಿಂದ 2 ಲಕ್ಷ ರೆಮ್ಡಿಸಿವಿರ್ ವೈಯಲ್ ಖರೀದಿಗೆ ಕೇಂದ್ರ ಸರ್ಕಾರ ಅನುಮತಿಸಿದಲ್ಲಿ ಏರ್ ಲಿಫ್ಟ್ ಮೂಲಕ ತರುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಪ್ರಯತ್ನಗಳು ನಡೆಯುತ್ತಿವೆ. ವಿದೇಶಗಳಲ್ಲಿ ಮನೆಯಲ್ಲಿಯೇ ಟೆಲಿ ಮೆಡಿಸಿನ್ ಮೂಲಕ ಚಿಕಿತ್ಸೆ ಪಡೆದು ಗುಣಮುಖರಾದವರಿದ್ದು, ನಮ್ಮಲ್ಲಿಯೂ ಈ ವ್ಯವಸ್ಥೆ ಹೆಚ್ಚು ಬಳಕೆಯಾಗಬೇಕಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.