ನವದೆಹಲಿ: ಅತೀ ಹೆಚ್ಚು ಕೊರೋನಾ ಪೀಡಿತ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ.
ಕೊರೋನಾವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮೋದಿ ಸರಣಿಯಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದಾರೆ.
ಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ದೆಹಲಿಯ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಈಗ ದೇಶದಲ್ಲಿ ಪ್ರತಿದಿನ ಒಟ್ಟು 3 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ.
ಹಲವಾರು ರಾಜ್ಯಗಳು ಜೀವ ಉಳಿಸುವ ಆಮ್ಲಜನಕದ ಕೊರತೆ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೋದಿ ಶೀಘ್ರದಲ್ಲೇ ದೇಶದ ಪ್ರಮುಖ ಆಮ್ಲಜನಕ ತಯಾರಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.