ಬೆಂಗಳೂರು: 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎ. 28 ರಿಂದ ಮೇ 18 ರ ವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ಉಪನಿರ್ದೇಶಕರುಗಳಿಗೆ ಪಪೂ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಈ ಬಾರಿ ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಆಯಾ ಕಾಲೇಜುಗಳಲ್ಲೇ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಆಯಾ ಕಾಲೇಜಿನ ಪ್ರಾಂಶುಪಾಲರೇ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವಂತೆಯೂ ಇಲಾಖೆ ಸೂಚನೆ ನೀಡಿದೆ. ಅಲ್ಲದೆ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುವಂತೆಯೂ ಇಲಾಖೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.