ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಟಕ್ಕೆ ಬಿಬಿಎಂಪಿ ಉಚಿತವಾಗಿ ಕೋವಿಡ್ ಶವ ಸಾಗಾಣೆ ವಾಹನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ.
ಈ ಸಂಬಂಧ ಬಿಬಿಎಂಪಿ ಈಗಾಗಲೇ ಪ್ರಕಟಣೆಯನ್ನು ಸಹ ನೀಡಿದ್ದು, ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ, ಈ ವ್ಯಾಪ್ತಿಗೆ ಒಳಪಡುವ ನಾಗರೀಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಉಚಿತ ಶವ ಸಾಗಾಟಕ್ಕೆ ಸಂಬಂಧಿಸಿದಂತೆ ಸಹಾಯವಾಣಿಯನ್ನೂ ಆರಂಭ ಮಾಡಿದೆ.
ಸಾರ್ವಜನಿಕರು ಈ ಸೇವೆಯ ಸದುಪಯೋಗವನ್ನು ಪಡೆಯಲು ಸಹಾಯವಾಣಿ ಸಂಖ್ಯೆಗಳಾದ 08022493202, 08022493203 ಅಥವಾ ವಾಟ್ಸಾಪ್ ಸಂಖ್ಯೆ 8792162736 ಅನ್ನು ಸಂಪರ್ಕ ಮಾಡುವಂತೆ ಬಿಬಿಎಂಪಿ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.