ಹುಬ್ಬಳ್ಳಿ: ಕೊರೋನಾ ಎರಡನೇ ಅಲೆಯಲ್ಲಿ ಕರುನಾಡು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳು 50% ಗಳಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಈ ಸಂಬಂಧ ಮಾತನಾಡಿದ ಅವರು ಮಾಜಿ ಸಚಿವ ಎಂ ಬಿ ಪಾಟೀಲ್ ಅವರು ಕೊರೋನಾ ಸೋಂಕಿತರಿಗೆ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ಶುಲ್ಕ ದಲ್ಲಿ ಚಿಕಿತ್ಸೆ ನೀಡುವುದಾಗಿ ಹೇಳಿ ಮಾದರಿಯಾಗಿದ್ದಾರೆ. ಇವರಂತೆಯೇ ಇತರ ಖಾಸಗಿ ಆಸ್ಪತ್ರೆಗಳು ಸಹ ಕಡಿಮೆ ವೆಚ್ಚದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆಯುವಂತಾಗಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇದ್ದು, ಇದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಗತ್ಯ ನೆರವು ನೀಡಲಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರ ಸಮಸ್ಯೆ ಪರಿಹಾರಕ್ಕೆ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಲಿರುವುದಾಗಿಯೂ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.