News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಿಎಂ ಕೇರ್ಸ್ ಫಂಡ್ ಅಡಿ ಸ್ಥಾಪನೆಯಾಗಲಿದೆ 551 PSA ಆಮ್ಲಜನಕ ಉತ್ಪಾದನಾ ಘಟಕ

ನವದೆಹಲಿ: ರಾಷ್ಟ್ರವು ಆಮ್ಲಜನಕದ ಕೊರತೆಯಿಂದ ಬಳಲುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ 551 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ (ಪಿಎಸ್ಎ) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಕೇಂದ್ರವು ನಿರ್ದೇಶನ ನೀಡಿದೆ.

ಕರೋನವೈರಸ್ ) ಸಾಂಕ್ರಾಮಿಕ ರೋಗವನ್ನು ಎದುರಿಸಲು ಸ್ಥಾಪಿಸಲಾದ ಪಿಎಂ ಕೇರ್ಸ್ ನಿಧಿಯ ಹಣವನ್ನು ಈ ಘಟಕಗಳ ಸ್ಥಾಪನೆಗೆ ಬಳಸಿಕೊಳ್ಳಲಾಗುತ್ತಿದೆ.

“ಆಮ್ಲಜನಕ ಉತ್ಪಾದನಾ ಘಟಕಗಳನ್ನು ವಿವಿಧ ರಾಜ್ಯಗಳ ಜಿಲ್ಲಾ ಕೇಂದ್ರದಲ್ಲಿರುವ ಗುರುತಿಸಲಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಈ ಕಾರ್ಯ ನಡೆಸಲಾಗುವುದು”‌ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಘಟಕಗಳನ್ನು ಆದಷ್ಟು ಬೇಗ ಕಾರ್ಯನಿರ್ವಹಿಸುವಂತೆ ಮಾಡಲು ಪಿಎಂ ಮೋದಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. “ದೇಶದ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಹೆಚ್ಚುವರಿ 162   ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಈ ಹಿಂದೆ ಪಿಎಂ ಕೇರ್ಸ್‌ ರೂ 201.58 ಕೋಟಿ ಹಂಚಿಕೆ ಮಾಡಿದೆ ”ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯಲ್ಲಿ ಅಡೆತಡೆಯನ್ನು ಎದುರಿಸಬಾರದು  ಎಂದು ಖಚಿತಪಡಿಸಿಕೊಳ್ಳುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top