ಬೆಂಗಳೂರು: ಕೊರೋನಾ ರೋಗಿಗಳಿಗೆ ಬೆಂಗಳೂರಿನಲ್ಲಿ 5 ಸಾವಿರ, ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಲಾ ಒಂದು ಸಾವಿರದಂತೆ ಪೋರ್ಟೆಬಲ್ ಆಕ್ಸಿಜನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಅವರು ವಿಕ್ಟೋರಿಯಾ ಆಸ್ಪತೆರ ಆವರಣದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ನಿರ್ಮಾಣವಾಗುತ್ತಿರುವ ಮೇಕ್ ಶಿಫ್ಟ್ ಆಸ್ಪತ್ರೆಗಳ ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಕ್ಸಿಜನ್ ಅಗತ್ಯ ಹೆಚ್ಚಾಗಿರುವವರು ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದಾರೆ.
ವಿಕ್ಟೋರಿಯಾ ಆವರಣದ ಒಂದು ಕಟ್ಟಡದಲ್ಲಿ 85 ಹಾಸಿಗೆಗಳು, ಪಿಎಂಎಸ್ಎಸ್ವೈನಲ್ಲಿ 180 ಹಾಸಿಗೆಗಳನ್ನು ಸಂಪೂರ್ಣವಾಗಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬಳಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅದರೊಂದಿಗೆ 100 ರಿಂದ 150 ಐಸಿಯು ವ್ಯವಸ್ಥೆಗಳನ್ನು ಒಳಗೊಂಡಿರುವ ಹಾಸಿಗೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಎರಡು ಸಾವಿರದಿಂದ ಎರಡು ಸಾವಿರದ ಐನೂರು ಮೇಕ್ ಶಿಫ್ಟ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದರ ಒಂದು ಘಟಕದಲ್ಲಿಯೇ 200 – 250 ಹಾಸಿಗೆಗಳಿರಲಿವೆ. ಆಸ್ಪತ್ರೆಗಳ ಆವರಣದಲ್ಲಿಯೇ ಇವುಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.